November 30, 2023

PM-KISAN; ರೈತರಿಗೆ ರೂ.9,000!- ಜೆ.ಪಿ.ನಡ್ಡಾ ಘೋಷಣೆ

ಕರ್ನಾಟಕ ನ್ಯೂಸ್24. ಕಾಂ
ಪಿಎಂ-ಕಿಸಾನ್ (PM Kisan)ಯೋಜನೆಯಡಿ ರೈತರಿಗೆ ನೀಡುವ ಆರ್ಥಿಕ ಸಹಾಯವನ್ನು ರೂ.6,000 ರಿಂದ ರೂ.9,000 ಕ್ಕೆ ಹೆಚ್ಚಿಸಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ (J.P Nadda) ಘೋಷಣೆ ಮಾಡಿದ್ದಾರೆ. ಇದು ರೈತರಲ್ಲಿ ಸಮತಸ ಇಮ್ಮಡಿಗೊಳಿಸಿದೆ.

READ| ರೈತರಿಂದ ಮೆಕ್ಕೆಜೋಳ ಖರೀದಿಗೆ ಮುಂದಾದ KMF
ಇದೇ ನ.12 ರಂದು ಹಿಮಾಚಲ ಪ್ರದೇಶ (Himachal Pradesh) ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಟ್ಟಾ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದರು. ಮತದಾರರನ್ನು ಸೆಳೆಯಲು ಹಿಮಾಚಲ ಪ್ರದೇಶದ ಬಿಜೆಪಿ ಘಟಕ ತನ್ನ ಪ್ರಣಾಳಿಕೆ ಹಲವಾರು ಆಕರ್ಷಕ ಯೋಜನೆಗಳನ್ನು ಪ್ರಕಟಿಸಿದೆ .
8 ಲಕ್ಷ ಕಾಮಗಾರಿ
ಹೆಣ್ಣು ಮಕ್ಕಳಿಗಾಗಿ ವಿಶೇಷ ಚುನಾವಣಾ ಪ್ರಣಾಳಿಕೆ ಯನ್ನೂ ಪ್ರಕಟಿಸಲಾಗಿದೆ. ಇದರಲ್ಲಿ 8 ಲಕ್ಷ ಜನರಿಗೆ ಉದ್ಯೋಗ, ಉಚಿತ ಎಲ್‌ಪಿಜಿ ಸಿಲಿಂಡರ್‌ಗಳು, 6 ರಿಂದ 12 ನೇ ತರಗತಿಯಲ್ಲಿ ಓದುತ್ತಿರುವ ಬಾಲಕಿ ಯರಿಗೆ ಉಚಿತ ಸೈಕಲ್‌ಗಳು ಮತ್ತು ಉನ್ನತ ಶಿಕ್ಷಣದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸ್ಕೂಟರ್‌ಗಳು ಸೇರಿವೆ.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜೆ.ಪಿ.ನಡ್ಡಾ ಹಳೆ ಪಿಂಚಣಿ ಯೋಜನೆ ಜಾರಿಯಾಗಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈ ನಿಟ್ಟಿನಲ್ಲಿ ಸಮಿತಿ ರಚಿಸಲಾಗಿದ್ದು, ಸಮಿತಿ ಶಿಫಾರಸು ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Leave a Reply

Your email address will not be published.