December 4, 2023

ಜನೌಷಧ ಕೇಂದ್ರ ಸ್ಥಾಪನೆ; ಕರ್ನಾಟಕಕ್ಕೆ ಅ’ದ್ವೀತಿಯ’ ಸ್ಥಾನ

ಕರ್ನಾಟಕ‌ ನ್ಯೂಸ್24.ಕಾಂ
ರಾಜ್ಯದಲ್ಲಿ ಈವರೆಗೆ 1,052 ಪ್ರಧಾನಮಂತ್ರಿ ಜನೌಷಧ (dispensaries) ಮಳಿಗೆಗಳನ್ನು ತೆರೆಯಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

ಇಡೀ ದೇಶದಲ್ಲಿ ಉತ್ತರ ಪ್ರದೇಶದ ನಂತರ ಕರ್ನಾಟಕ 2ನೇ ಸ್ಥಾನದಲ್ಲಿದೆ. ಗ್ರಾಮೀಣ ಭಾಗಗಳಲ್ಲಿ ಹೆಚ್ಚಿನ ಮಳಿಗೆಗಳನ್ನು ತೆರೆಯಲು ಸರ್ಕಾರ ಕಾರ್ಯೋನ್ಮುಖ ವಾಗಿದೆ ಎಂದರು.
ರಾಜ್ಯದಲ್ಲಿ ಹೊಸದಾಗಿ 500 ಜನೌಷಧಿ ಮಳಿಕೆ ತೆರೆ ಯುವ ಉದ್ದೇಶ ಹೊಂದಲಾಗಿದ್ದು, ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ 40 ಮಳಿಗೆ ಸ್ಥಾಪನೆಗೆ ಅನುಮತಿ ನೀಡುವಂತೆ ಬಿಪಿಪಿಐಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ರಾಜ್ಯದಲ್ಲಿ ಜನರಿಕ್ ಔಷಧಿಗಳು ಬ್ರಾಂಡೆಡ್ ಆಗಿದ್ದು, ಮಾರುಕಟ್ಟೆ ದರಕ್ಕಿಂತ ಶೇಕಡ 50 ರಿಂದ 80ರಷ್ಟು ಕಡಿಮೆ ದರದಲ್ಲಿ ದೊರಕುತ್ತಿದೆ ಎಂದರು.
ಜನೌಷಧಿ ಮಳಿಗೆಗಳಿಂದ ಬಡತನ ರೇಖೆ ಕೆಳಗಿನ ಕುಟುಂಬಗಳಿಗೆ ಹೆಚ್ಚು ಅನುಕೂಲವಾಗುತ್ತಿದ್ದು, ಆರೋಗ್ಯಕ್ಕಾಗಿ ಮಾಡುತ್ತಿರುವ ವೆಚ್ಚ ಗಣನೀಯ ವಾಗಿ ಕಡಿಮೆಯಾಗುತ್ತಿದೆ ಎಂದು ಸಚಿವ ಡಾ. ಸುಧಾಕರ್ ಹೇಳಿದರು.

Leave a Reply

Your email address will not be published.