ಬೆಳೆನಷ್ಟ: ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆ

ಕರ್ನಾಟಕ ನ್ಯೂಸ್24.ಕಾಂ| Crime
ಕೃಷಿಗಾಗಿ ಸಾಲ ಮಾಡಿದ್ದ ಮರುಪಾವತಿ ಮಾಡಲು ಸಾಧ್ಯವಾಗದೆ ರೈತನೊಬ್ಬ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ರಾಯಚೂರು ತಾಲೂಕು ಡಿ.ಯದ್ಲಾಪುರ ಗ್ರಾಮದಲ್ಲಿ ಘಟನೆ ಜರುಗಿದೆ. ನಾಗಪ್ಪ ಕುರುಬರ್ ಆತ್ಮಹತ್ಯೆ ಮಾಡಿಕೊಂಡ ರೈತ.
ಬೆಳೆ ನಷ್ಟ
ಬ್ಯಾಂಕ್ ಸೇರಿದಂತೆ ಖಾಸಗಿ ವಲಯಗಳಲ್ಲಿ ಕೃಷಿಗಾಗಿ ಸಾಲ ಮಾಡಿದ್ದ. ಬೆಳೆ ಸರಿಯಾಗಿ ಬಂದಿರಲಿಲ್ಲ. ಬೆಳೆ ನಷ್ಟದಿಂದ ರೈತ ಕಂಗಾಲಾಗಿದ್ದ ಎಂದು ಹೇಳಲಾಗುತ್ತಿದೆ.
ಹೊಲದಲ್ಲಿ ಬೆಳೆದ ಫಸಲಿಗೆ ಸಿಂಪಡಣೆ ಮಾಡಲು ತಂದಿದ್ದ ಕ್ರಿಮಿನಾಶಕ ಕುಡಿದು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯರಗೇರಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.