Cricket| ಭಾರತ-ಬಾಂಗ್ಲಾ 2ನೇ ಟೆಸ್ಟ್: ಬಾಂಗ್ಲಾ 227 ರನ್‌ಗಳಿಗೆ ಆಲೌಟ್

ಕರ್ನಾಟಕ ನ್ಯೂಸ್24.ಕಾಂ|Sports
ಬಾಂಗ್ಲಾದೇಶದ ಢಾಕಾದ ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಬಾಂಗ್ಲಾದೇಶ ನಡುವಣ ಎರಡನೇ ಮತ್ತು ಅಂತಿಮ ಟೆಸ್ಟ್ ಕ್ರಿಕೆಟ್ ಪಂದ್ಯದ ಮೊದಲ ದಿನದಾಟದಲ್ಲಿ ಭಾರತ ಮೇಲುಗೈ ಸಾಧಿಸಿದೆ.
READ|ಕೋಚ್ ಬಿಹಾರ್ ಟ್ರೋಫಿ ಪಂದ್ಯಾವಳಿಯಲ್ಲಿ ಮಿಂಚಿದ ಕಲಬುರಗಿ ಶಶಿ
ಟಾಸ್ ಗೆದ್ದು ಬ್ಯಾಟ್ ಮಾಡಿದ ಬಾಂಗ್ಲಾದೇಶ ತಂಡ 227 ರನ್‌ಗಳಿಗೆ ಎಲ್ಲಾ ವಿಕೆಟ್ ಕಳೆದುಕೊಂಡಿತು. ಮೊಮಿನೂಲ್ ಹಕ್ 84 ರನ್ ಗಳಿಸಿದರು. ನಾಯಕ ಶಕೀಬ್ ಹಲ್ ಹಸನ್ 16, ಮುಷ್ಫಿಕರ್ ರಹೀಮ್ 26, ಲಿಟನ್ ದಾಸ್ 25, ಮೆಹದಿ ಹಸನ್ 15 ಹಾಗೂ ನೂರುಲ್ ಹಸನ್ 6 ರನ್ ಗಳಿಸಿದರು.
ಭಾರತದ ಪರ ಉಮೇಶ್ ಯಾದವ್ ಹಾಗೂ ರವಿಚಂದ್ರನ್ ಅಶ್ವಿನ್ ತಲಾ 4 ವಿಕೆಟ್ ಪಡೆದಿದ್ದರೆ ಜಯದೇವ್ ಉನಾದ್ಕತ್ 2 ವಿಕೆಟ್ ಪಡೆದಿದ್ದಾರೆ.
ನಂತರ ಇನ್ನಿಂಗ್ಸ್ ಆರಂಭಿಸಿದ ಭಾರತ ಯಾವುದೇ ವಿಕೆಟ್ ನಷ್ಟವಿಲ್ಲದೆ 19 ರನ್ ಗಳಿಸಿದೆ. ಟೀಂ ಇಂಡಿಯಾ ನಾಯಕ ಕೆಎಲ್ ರಾಹುಲ್ ಅಜೇಯ 3 ರನ್ ಹಾಗೂ ಶುಭ್ಮನ್ ಗಿಲ್ ಅಜೇಯ 14 ರನ್ ಕಲೆ ಹಾಕಿದ್ದು 2ನೇ ದಿನದಾಟವನ್ನು ಆರಂಭಿಸಲಿದ್ದಾರೆ.
ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ಮೊದಲ ಟೆಸ್ಟ್ ಪಂದ್ಯದಲ್ಲಿ ಗೆಲುವು ಸಾಧಿಸಿದೆ. ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಅಂಕಪಟ್ಟಿಯಲ್ಲಿ ಭಾರತ ತನ್ನ ಸ್ಥಾನ ಭದ್ರಪಡಿಸಿಕೊಳ್ಳಬೇಕಾದರೆ ಈ ಪಂದ್ಯವನ್ನು ಗೆಲ್ಲಲೆಬೇಕಿದೆ.